2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು, ಸಣ್ಣ ಪಕ್ಷಗಳ ಅಭ್ಯರ್ಥಿಗಳಿಗೂ ಕೂಡ ಗೆಲುವು ಸಾಧ್ಯತೆ; ಸಮೀಕ್ಷಾ ವರದಿ

ಬೆಂಗಳೂರು;ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಐಪಿಎಸ್‌ಎಸ್ ತಂಡದ ಸಹಯೋಗದೊಂದಿಗೆ ಹೈದರಾಬಾದ್ ನ ಎಸ್‌ಎಎಸ್ ಗುಂಪು ನಡೆಸಿದ ಸಮೀಕ್ಷೆಯಲ್ಲಿ ಈ ಅಂಶಗಳು ಬಹಿರಂಗವಾಗಿದ್ದು, ಕಾಂಗ್ರೆಸ್ ನ ಮತಗಳಿಕೆಯಲ್ಲೂ ಹೆಚ್ಚಳದ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿಡೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇದಲ್ಲದೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು ಏಳು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.

ಟಾಪ್ ನ್ಯೂಸ್