ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಗುಜರಾತ್ ನಲ್ಲಿ ಬಿಜೆಪಿ ಮತ್ತು ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಈವರೆಗಿನ ಫಲಿತಾಂಶದಲ್ಲಿ ಮುನ್ನಡೆ ಸಾಧಿಸಿದೆ.
ಗುಜರಾತ್ ನಲ್ಲಿ ಬಿಜೆಪಿ 151 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಎಎಪಿ 6 ಕ್ಷೇತ್ರಗಳಲ್ಲಿ ಹಾಗು ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ನಾಲ್ವರು ಈಗಾಗಲೇ ಜಯ ಸಾಧಿಸಿದ್ದು ಕಾಂಗ್ರೆಸ್ ನ ಓರ್ವ ಗೆಲುವನ್ನು ಸಾಧಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 36, ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.