ರಾಜ್ಯದಲ್ಲಿ ವಿದ್ಯುತ್ ಬೆಲೆ ಹೆಚ್ಚಳದ ಸಾಧ್ಯತೆ; ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್ ಸುದ್ದಿ

ಬೆಂಗಳೂರು;ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್ ಸುದ್ದಿ ಇದಾಗಿದ್ದು, ರಾಜ್ಯದಲ್ಲಿ ವಿದ್ಯುತ್ ಬೆಲೆ ಹೆಚ್ಚಳದ ಸಾಧ್ಯತೆ ಇದೆ ಎನ್ನಲಾಗಿದೆ.

1,657 ಕೋಟಿ ರೂಪಾಯಿಗಳನ್ನು ತೆರಿಗೆ ಮೂಲಕ ಸಂಗ್ರಹಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದಕ್ಕೆ ಸರಕಾರ ಮುಂದಾದರೆ ಕೈಗಾರಿಕೆಗಳು ಮತ್ತು ಗೃಹೋಪಯೋಗಿ ವಿದ್ಯುತ್ ಗ್ರಾಹಕರ ವಿದ್ಯುತ್ ಬೆಲೆ ಹೆಚ್ಚಳವಾಗಲಿದೆ.

ಈ ಕುರಿತು ಎಸ್ಕಾಂ ಗಳು ಸಲ್ಲಿಸಿರುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ ಪ್ರತಿ ತಿಂಗಳು 30 ಸಾವಿರ ರೂಪಾಯಿ ವಿದ್ಯುತ್ ಬಿಲ್ ಪಾವತಿಸುತ್ತಿರುವ ಕೈಗಾರಿಕೆಗಳು 60 ರಿಂದ 65 ಸಾವಿರ ರೂಪಾಯಿ ಪಾವತಿಸಬೇಕಾಗುತ್ತದೆ ಎಂದು ವರದಿ ತಿಳಿಸಿದೆ‌.

1500 ರೂಪಾಯಿ ವಿದ್ಯುತ್ ಬಿಲ್ ಪಾವತಿಸುತ್ತಿರುವ ಗೃಹ ಬಳಕೆ ಗ್ರಾಹಕರು 600 ರೂಪಾಯಿ ಸ್ಥಿರ ಶುಲ್ಕ ಸೇರಿ 2,100 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಪಾವತಿಸಬೇಕಾದ ಸ್ಥಿತಿ‌ ನಿರ್ಮಾಣವಾಗಬಹುದು‌ ಎನ್ನಲಾಗಿದೆ.

ಟಾಪ್ ನ್ಯೂಸ್