ಬೆಳ್ತಂಗಡಿ; ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಳಂತಿಲ ಗ್ರಾಮದ ಪೆದಮಲೆಯಲ್ಲಿ ನಡೆದಿದೆ.

ಕರಾಯ ಗ್ರಾಮದ ಸಗುಣ ಎಂಬವರು ಮೃತರು. ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮನೆಯ ಕೆಲಸಕ್ಕೆ ತೆರಳಿದ ಸಗುಣ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ್ದಾರೆ.

ಗಂಭೀರವಾಗಿದ್ದ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿತ್ತು.ಆದರೆ ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್