4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ

ಭುವನೇಶ್ವರ:ನಾಲ್ಕು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಸ್ಕಾ ಬಳಿ ಬಂಧಿಸಲಾಗಿದೆ.

ಮಗು ನಾಪತ್ತೆಯಾದ ಬಳಿಕ ಮನೆಯವರು ಅಕ್ಕಪಕ್ಕದ ಮನೆಯ ಟೆರೇಸ್‌ನಿಂದ ರಕ್ತದ ಮಡುವಿನಲ್ಲಿ ಮಗುವನ್ನು ಕಂಡಿದ್ದಾರೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲಾಗಲಿಲ್ಲ.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕಬ್ಬಿಣದ ಬಾಗಿಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com