ಕಜಿಕಿಸ್ತಾನ ನಂಬರ್‌ನಿಂದ ಮಿಸ್ಡ್ ಕಾಲ್ ಬಂದಿದೆ ಎಂದು ದೂರು ಕೊಟ್ಟ ಈಶ್ವರಪ್ಪ

ಶಿವಮೊಗ್ಗ:ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಕಜಿಕಿಸ್ತಾನ ನಂಬರ್‌ನಿಂದ ಭಾನುವಾರ ರಾತ್ರಿ ಮಿಸ್ಡ್ ಕಾಲ್ ಬಂದಿದೆ ಎಂದು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.

ನನಗೆ ಹಿಂದಿನಿಂದಲೂ ಬೆದರಿಕೆ ಕರೆಗಳು ಬರುತ್ತಿದ್ದು, ಇದು ಸಹ ಯಾವುದೋ ದುಷ್ಕರ್ಮಿಗಳದ್ದು ಇರಬಹುದು ಎಂದು ನಾನು ಕರೆ ಸ್ವೀಕರಿಸಲಿಲ್ಲ ಎಂದು ದೂರು ದಾಖಲಿಸಿದ್ದಾರೆ.

ಇನ್ನು ಭಾನುವಾರ ರಾತ್ರಿ 12.30ಕ್ಕೆ +7(678)815-46-5 ನಂಬರ್‌ ನಿಂದ ಮಿಸ್ಡ್ ಕಾಲ್ ಬಂದಿದೆ. ಹಾಗಾಗಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ದೂರು ನೀಡುತ್ತಿರುವೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರದ ಜಯೇಶ್ ಅಲಿಯಾಸ್ ಶಾಹೀರ್ ಶೇಕ್ ಎಂಬುವರು ನನ್ನ ಕೊಲೆಗೆ ಯತ್ನ ನಡೆಸುವ ಬಗ್ಗೆ ತಿಳಿದುಬಂದಿತ್ತು.ಇದು ಕೂಡ ಅಂತದ್ದೇ ದುಷ್ಕರ್ಮಿಯ ಕೃತ್ಯ ಇರಬಹುದು ಎಂದು ಈಶ್ವರಪ್ಪ ಹೇಳಿದ್ದಾರೆ.

ಚುನಾವಣೆಗೆ ಮೊದಲು ಬಿಜೆಪಿಯನ್ನು ಕೋಮುವಾದಿ ಪಕ್ಷ ಎಂದಿದ್ದರು. ಆದರೀಗ ಸಿದ್ದರಾಮಯ್ಯ ಪರವಾಗಿ ಕುರುಬರು ಹಾಗೂ ಡಿ.ಕೆ.ಶಿವಕುಮಾರ್ ಪರವಾಗಿ ಒಕ್ಕಲಿಗರು ಲಾಬಿ ಮಾಡುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಾತಿವಾದ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಚನ್ನಬಸಪ್ಪ ಅವರನ್ನು ಗೆಲ್ಲಿಸಿದ ಎಲ್ಲ ಮತದಾರರಿಗೆ ಅಭಿನಂದನೆಗಳು.ಜಾತಿಗೆ ಬೆಲೆ ಕೊಡದೇ ಜಯ ನೀಡಿದ್ದಾರೆ.ಪ್ರತಿ ಬೂತ್​ನಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ.ಇದಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.ಎಲ್ಲ ಸಮಾಜದ ಅಭಿವೃದ್ಧಿಗೆ ಜನ ಬೆಂಬಲ ನೀಡಿದ್ದಾರೆ‌.ನಮ್ಮ ರಾಷ್ಟ್ರೀಯ ನಾಯಕತ್ವಕ್ಕೆ ಜಯ ತಂದಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com