ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಅಪಘಾತ; ಹಠ ಹಿಡಿದು ಆಸ್ಪತ್ರೆಯಿಂದಲೇ ಪರೀಕ್ಷೆ ಬರೆದ ಬಾಲಕ

ಪರೀಕ್ಷಾ ಕೇಂದ್ರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬೈಕ್ ಅಪಘಾತಗೊಂಡು ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದು, ಕೊನೆಗೆ ಹಠ ಹಿಡಿದು ಬಾಲಕ ಪರೀಕ್ಷೆಯನ್ನು ಆಸ್ಪತ್ರೆಯಲ್ಲೆ ಬರೆದಿದ್ದಾನೆ.ಈ ಘಟನೆ ಪ.ಬಂಗಾಳದಿಂದ ವರದಿಯಾಗಿದೆ.

ಅಲಿನಗರ್ ಯಾಸಿನ್​ ಮಲೀಕ್​ ಶಾಲೆಯ ವಿದ್ಯಾರ್ಥಿ 15 ವರ್ಷದ ಸಂದೀಪ್ ಪರೀಕ್ಷೆಗೆ ತೆರಳುವಾಗ ಅಪಘಾತವಾಗಿದೆ. ಅಪಘಾತದಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು.ಸಂದೀಪ್ ಗೆ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರೂ ಕೂಡಾ ಆತ ತನ್ನನ್ನು ಪರೀಕ್ಷಾ ಕೊಠಡಿಗೆ ಬಿಡಿ ಎಂದು ಹೇಳಿದ.ಕೊನೆಗೆ ಆತನಿಗೆ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲಾಯಿತು.

​ಆದರೆ ಪರೀಕ್ಷೆ ಬರೆಯುತ್ತಿರುವ ಸಂದರ್ಭದಲ್ಲಿ ಈತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.ಆಗ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಅದಾದ ನಂತರ ಚಿಕಿತ್ಸೆ ನೀಡಿ ತಲೆಗೆ ಎಂಟು ಹೊಲಿಗೆಗಳನ್ನು ಹಾಕಲಾಗಿದೆ. ಆದರೂ ಮತ್ತೆ ಮನವಿ ಮಾಡಿಕೊಂಡು ತಾನು ಪರೀಕ್ಷೆ ಬರೆಯಲೇ ಬೇಕು ಎಂದು ಹಠ ಮಾಡಿದ್ದರಿಂದ ಆಸ್ಪತ್ರೆಗೆ ಪರೀಕ್ಷೆ ಪ್ರಶ್ನೆ ಪತ್ರಿಕೆ ತರಿಸಿಕೊಡಲಾಗಿದೆ.

ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತು ಸಂದೀಪ್ ಪರೀಕ್ಷೆ ಬರೆದಿದ್ದಾನೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com