ಬಂಟ್ವಾಳ; ಸಜಿಪದಲ್ಲಿ ಕತಾರ್ ನಲ್ಲಿ ಮೃತ ಫಹದ್ ಅಂತ್ಯ ಸಂಸ್ಕಾರ, ಹರಿದು‌ ಬಂದ‌ ಜನಸಾಗರ

ಬಂಟ್ವಾಳ;ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತ ಬಂಟ್ವಾಳ ಮೂಲದ ಯುವಕ ಫಹದ್ ಮೃತದೇಹವನ್ನು ಊರಿಗೆ ತರಲಾಗಿದ್ದು, ಸಜಿಪ ನಡು ಜುಮಾ ಮಸೀದಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ.




ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್
ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ.ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ.ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಮೃತದೇಹವನ್ನು ಕಾನೂನು ಪ್ರಕ್ರಿಯೆ‌ನಡೆಸಿ ಬಂಟ್ವಾಳದ ಮನೆಗೆ ನಿನ್ನೆ ರಾತ್ರಿ ತರಲಾಗಿದೆ.ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಅಂತ್ಯ ಸಂಸ್ಕಾರವನ್ನು ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ ಜನಸ್ತೋಮವೇ ಹರಿದು ಬಂದಿತ್ತು.ಫಹದ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿತ್ತು.

ಫಹದ್ ತಂದೆ ತಾಯಿ ಮತ್ತು ಸಹೋದರನಿಗೆ ಮತ್ತು ಕುಟುಂಬ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ‌‌.







ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

Developed by eAppsi.com