ಮುಸ್ಲಿಂ ಕುಟುಂಬದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ; 6 ಜನರ ಬಾಳಿಗೆ ಬೆಳಕಾದ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು;ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನವನ್ನು ಮಾಡಿದ್ದು ಸಾವಿನಲ್ಲಿ ಯುವಕ 6 ಜನರ ಬದುಕಿಗೆ ಬೆಳಕಾಗಿದ್ದಾನೆ.

22 ವರ್ಷದ ಫಾರ್ದಿನ್ ಖಾನ್ ಜೂನ್ 4 ರಂದು ತುಮಕೂರಿನ ಶಿರಾ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.ಜೂನ್ 7ರ ಬೆಳಗ್ಗೆ ಫಾರ್ದಿನ್ ಖಾನ್ ಮೆದುಳು ನಿಷ್ಕ್ರೀಯಗೊಂಡಿರುವುದಾಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ್ದರು. ಉಳಿದೆಲ್ಲಾ ಅಂಗಾಂಗಗಳು ವೆಂಟಿಲೇಟರ್ ಸಹಾಯದಿಂದ ಕಾರ್ಯನಿರ್ವಹಿಸುತ್ತಿದ್ದವು.ಈ ವೇಳೆ ದೊಡ್ಡ ಮನಸ್ಸು ಮಾಡಿದ ಫಾರ್ದಿನ್ ಕುಟುಂಬ ಅಂಗಾಂಗ ದಾನ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಕಟ್ಟು ಪಾಡುಗಳನ್ನು ಮೀರಿ ಅಂಗಾಂಗ ದಾನ ಮಾಡಿದ ವ್ಯಕ್ತಿಯ ಕುಟುಂಬವನ್ನು ಸನ್ಮಾನಿಸುವ ಮೂಲಕ ಅಂಗಾಂಗ ದಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಧನ್ಯವಾದ ಸಲ್ಲಿಸಿದ್ದಾರೆ.

ಇಂದು ಫಾರ್ದಿನ್ ಖಾನ್ ಅವರ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗುಂಡೂರಾವ್, ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದ ಫಾರ್ದಿನ್ ಖಾನ್ ಅವರ ಕುಟಂಬವನ್ನು ಸನ್ಮಾನಿಸಿದರು.

ಫಾರ್ದಿನ್ ಖಾನ್ ಹೃದಯವನ್ನು ನಾರಾಯಣ ಹೃದಯಾಲಯಕ್ಕೆ ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಗೆ ಎಡ ಮೂತ್ರಪಿಂಡ ಮತ್ತು ಫ್ಯಾಂಕ್ರಿಯಾಸ್‌ನ್ನು ಅಪೋಲೋ ಆಸ್ಪತ್ರೆಗೆ, ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಗೆ,ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ