9 ತಿಂಗಳ ಗರ್ಭಿಣಿ ಹಂದಿ ಜ್ವರದಿಂದ ಸಾವು

ಮೈಸೂರು; 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ.

ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಮೃತರು, ಛಾಯಾಗೆ 4 ವರ್ಷದ ಗಂಡು ಮಗು ಇದೆ. 2ನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು.

ಇನ್ನೂ ಕೆಲವೇ ದಿನದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಗೆ ಎಚ್‌1 ಎನ್‌1 ಸೋಂಕು ತಗುಲಿತ್ತು.ಛಾಯಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್