BIG NEWS ನಟ ಚೇತನ್ ಗೆ 14ದಿನಗಳ ನ್ಯಾಯಾಂಗ ಬಂಧನ; ಚೇತನ್ ಬಂಧನಕ್ಕೆ ಕಾರಣವಾದ ಪೋಸ್ಟ್ ನಲ್ಲಿ ಏನಿದೆ? ಇಲ್ಲಿದೆ ಮಾಹಿತಿ..

ಬೆಂಗಳೂರು;ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ವಿರುದ್ಧ ಪೋಸ್ಟ್‌ ಮಾಡಿದ ನಟ ಅಹಿಂಸಾ ಚೇತನ್‌ ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ರನ್ನು ಬಂಧಿಸಿ ಕೋರ್ಟ್ ಗೆ ಇಂದು ಹಾಜರುಪಡಿಸಿದ್ದರು.
ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 32ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಚೇತನ್ ಬರೆದ ಪೋಸ್ಟ್‌ನಲ್ಲಿ ಏನಿದೆ?( ನೇರವಾಗಿ ನಕಲು ಮಾಡಲಾಗಿದೆ)
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದುರಿಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದೊಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ರಾಮನ ಜನ್ಮಭೂಮಿ- ಇದು ಒಂದು ಸುಳ್ಳು.
ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು.
ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು- ಸತ್ಯವೇ ಸಮಾನತೆ ಎಂದು ಬರೆದುಕೊಂಡಿದ್ದಾರೆ.

ಇದರ ವಿರುದ್ಧ ಹಿಂದೂ ಸಂಘಟನೆಗಳು ಶೇಷಾದ್ರಿಪುರ ಪೊಲೀಸರಿಗೆ ದೂರು ನೀಡಿತ್ತು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com