ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್
ವಿರುದ್ಧ ಶ್ರೀರಂಗಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298ರಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ

ಸಾಮಾಜಿಕ ಕಾರ್ಯಕರ್ತೆ ನಜ್ಮ ನಝೀರ್ ಚಿಕ್ಕನೇರಳೆ ಅವರು ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರವಿವಾರ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ ಎಂದು ಅವಹೇಳನಾಕಾರಿಯಾಗಿ ಮಾತನಾಡಿದ್ದರು‌.

ಟಾಪ್ ನ್ಯೂಸ್