ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರಿನ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ತೆರಳಿ ಮಾಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಡಿ.23ರಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಹಿನ್ನಲೆಯಲ್ಲಿ ಕ್ರಿಸ್ ಮಸ್ ಟ್ರೀ ಪ್ರದರ್ಶನ ಹಾಗೂ ಅದಕ್ಕೆ 200ರೂ. ಟಿಕೆಟ್ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರೋಧಿಸಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಮಾಲ್ನ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ.

ಇದಲ್ಲದೆ ಡಿ.25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾನೆ.ಮಾಹಿತಿ ತಿಳಿದು ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪುನೀತ್ ಹಾಗೂ ಇತರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್