ಮುಂಬೈ;ಗೌತಮ ಬುದ್ಧ,ಜ್ಯೋತಿಬಾ ಫುಲೆ ಮತ್ತು ಪೆರಿಯಾರ್ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ ಆರೋಪದಲ್ಲಿ ಹಿಂದುತ್ವ ನಾಯಕ ಸಂಭಾಜಿ ಭಿಡೆ ವಿರುದ್ಧ ನವಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಕಳೆದ ತಿಂಗಳು ಭಿಡೆ ತನ್ನ ಭಾಷಣದಲ್ಲಿ ಮಹಾತ್ಮಾ ಗಾಂಧಿಯವರ ವಂಶಾವಳಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದ ಆರೋಪದಲ್ಲಿ ಅಮರಾವತಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಮುಂಬೈನ ವಕೀಲ ಅಮಿತ್ ಕಟಾರ್ನವರೆ ಭಿಡೆ ವಿರುದ್ಧ ದೂರು ದಾಖಲಿಸಿದ್ದಾರೆ.ಭಿಡೆಯವರ ಹೇಳಿಕೆಗಳು ಸಮಾಜ ಸುಧಾರಕರನ್ನು ಗೌರವಿಸುವವರ ಭಾವನೆಗಳಿಗೆ ನೋವನ್ನುಂಟು ಮಾಡಿವೆ ಎಂದು ಅವರು ಆರೋಪಿಸಿದ್ದಾರೆ.