ಸುಳ್ಳು ಪೋಸ್ಟ್ ಹಾಕಿದ ಆರೋಪ; ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು; ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಕುಂತಲಾ ನಟರಾಜ್‌, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದರು. ಬಾಯ್ಕಾಟ್ ಲುಲುಮಾಲ್‌ ಎಂದು ಬರೆದಕೊಂಡಿದ್ದರು. ಪೋಸ್ಟ್‌ನ್ನು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಟ್ಯಾಗ್‌ ಮಾಡಿದ್ದರು.

ಶಕುಂತಲಾ ನಟರಾಜ್‌ ಸುಳ್ಳು ಪೋಸ್ಟ್‌ ಹಾಕಿದ್ದಾರೆ ಮತ್ತು ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿ ಇಲ್ಲಿಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್‌ ಹಾಕಿದ್ದರು. ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು.

ಟಾಪ್ ನ್ಯೂಸ್