ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಪೋಸ್ಟ್; ವಿಶ್ವೇಶ್ವರ್ ಭಟ್ ವಿರುದ್ಧ ಪ್ರಕರಣ ದಾಖಲು, ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

ಅವಹೇಳನಕಾರಿ ಫೇಸ್ಬುಕ್‌ ಪೋಸ್ಟ್‌ ಹಾಕಿದ ಅರೋಪದಲ್ಲಿ ವಿಶ್ವವಾಣಿಯ ಸಂಪಾದಕ ವಿಶ್ವೇಶ್ವರ ಭಟ್‌ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
ಬಾಲಿವುಡ್ ನಟಿ ಮರ್ಲಿನ್ ಮನ್ರೋ ಹೇಳಿಕೆ ಉಲ್ಲೇಖಿಸಿ ಹೆಣ್ಣುಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ.ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ.ಆಗೊಮ್ಮೆ-ಈಗೊಮ್ಮೆ ಧರಿಸಿದಾಗ, ಮನೆಯಲ್ಲಿ’ಸದನ ಸದೃಶ’ವಾತಾವರಣ ನಿರ್ಮಿಸಬಾರದು. ಕೆಲ ದಿನಗಳ ಬಳಿಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ.ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ.ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ,ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ?ಎಂದು ವಿಶ್ವೇಶ್ವರ್‌ ಭಟ್‌ ತಮ್ಮ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದರು.

ಫೋಸ್ಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿತ್ತು.ಇದೀಗ ಪ್ರಕರಣ ಕೂಡ ದಾಖಲಾಗಿದೆ.

ಟಾಪ್ ನ್ಯೂಸ್