ನೇಪಾಳ;ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ ಎಂದು ವರದಿ ತಿಳಿಸಿದೆ.
ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಏತಿ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್-72 ವಿಮಾನವು ಭಾನುವಾರ ಪತನಗೊಂಡಿದೆ.
ಘಟನೆಯಲ್ಲಿ ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಳದ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.