ಮಂಗಳೂರು; ಗಿನ್ನೆಸ್ ದಾಖಲೆ ಬರೆದ ದೇರಳಕಟ್ಟೆಯ ಯುವಕ

ಮಂಗಳೂರು;ದೇರಳಕಟ್ಟೆಯ ಯುವಕ ಮೊಹಮ್ಮದ್ ಶಲೀಲ್ ಫುಟ್ಬಾಲ್‌ನಲ್ಲಿ ಗಿನ್ನೆಸ್‌ ನ ವಿಶ್ವದ ಇಬ್ಬರ ದಾಖಲೆ ಮುರಿದು ತನ್ನದೇ ಆದ ಹೊಸ ದಾಖಲೆ ಬರೆದಿದ್ದಾರೆ.

ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್
ಕೇವಲ 30 ಸೆಕೆಂಡುಗಳಲ್ಲಿ ಫುಟ್ಬಾಲ್‌ನೊಂದಿಗೆ 10 ರೌಂಡ್‌ಗಳ ನಟ್ ಮೆಗ್ ಸಾಧಿಸುವ ಮೂಲಕ ಗಿನ್ನೆಸ್ ದಾಖಲೆ ಬರೆದಿದ್ದಾರೆ‌.

2017ರಲ್ಲಿ ಇಂಗ್ಲೆಂಡ್ ನ ಡೆಲೆ ಅಲ್ಲಿ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು.2021ರ ಫೆಬ್ರವರಿಯಲ್ಲಿ ಮಹಿಳಾ ಪುಟ್ಬಾಲ್ ಆಟಗಾರ್ತಿ ಅಮೆರಿಕಾ ಕ್ಯಾಲಿಫೋರ್ನಿಯಾದ ವೆಸ್ಟ್ ಲೇಕ್ ಹಳ್ಳಿಯ ತಾಷಾ ನಿಕೋಲ್ ತೇರಾನಿ ಒಂದು ನಿಮಿಷದಲ್ಲಿ 18 ಸುತ್ತುಗಳನ್ನು ಹೊಡೆಯುವ ಮೂಲಕ ಗಿನ್ನೆಸ್ ದಾಖಲೆ ಸಾಧಿಸಿದ್ದರು.

ಟಾಪ್ ನ್ಯೂಸ್