ಹಾಸನ:ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗ್ರಾಮವೊಂದರಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ.
ಚಿಕ್ಕಬಾಣಗೆರೆ ಗ್ರಾಮದ ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ನಾಪತ್ತೆಯಾಗಿದ್ದರು. ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರಿಂದ ಪೋಷಕರು ಮತ್ತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.
ಈ ಕುರಿತು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ತಕ್ಷಣ ಎಚ್ಚೆತ್ರ ಪೊಲೀಸರು ಮಕ್ಕಳನ್ನು ಪತ್ತಹಚ್ಚಿದ್ದಾರೆ
ಪೊಲೀಸರು ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹುಡುಕಾಟ ನಡೆಸಿದ್ದರು.
ನಾಲ್ವರು ಮಕ್ಕಳು ಬೆಂಗಳೂರಿನಲ್ಲಿ ಸುತ್ತಾಡಿ ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು. ಇದೀಗ ಪೊಲೀಸರಿಗೆ ಹಾಸನದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ.