ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ;ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ತೆಲಂಗಾಣ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಇಟಾಲ ರಾಜೇಂದರ್ ಅವರನ್ನು ನೇಮಕ ಮಾಡಲಾಗಿದೆ.

2024ರ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್