ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡಿನ ದಾಳಿ ಪ್ರಕರಣ; ನಾಲ್ವರ ಬಂಧನ

ಉತ್ತರಪ್ರದೇಶ; ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡು ಹಾರಿಸಿದ ಆರೋಪದಲ್ಲಿ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ‌.

ಆರೋಪಿಗಳನ್ನು ವಿಕಾಸ್, ಪ್ರಶಾಂತ್ ಮತ್ತು ಲೋವಿಶ್ ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಯುಪಿಯ ಸಹರಾನ್‌ಪುರದವರಾಗಿದ್ದಾರೆ. ನಾಲ್ಕನೇ ಆರೋಪಿ ವಿಕಾಸ್ ಹರಿಯಾಣದ ಕರ್ನಾಲ್ ಮೂಲದವನಾಗಿದ್ದಾನೆ.

ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಯುಪಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಂಬಾಲಾ ಎಸ್‌ಟಿಎಫ್ ಘಟಕದ ಉಪ ಪೊಲೀಸ್ ಅಧೀಕ್ಷಕ ಅಮನ್ ಕುಮಾರ್ ತಿಳಿಸಿದ್ದಾರೆ.

ಹರಿಯಾಣ ವಿಶೇಷ ಕಾರ್ಯಪಡೆಯ ಅಂಬಾಲಾ ಘಟಕವು ಉತ್ತರ ಪ್ರದೇಶ ಪೊಲೀಸರ ಜೊತೆ ಸೇರಿ ಅಂಬಾಲಾದ ಶಹಜಾದ್‌ಪುರ ಪ್ರದೇಶದ ಧಾಬಾ ಬಳಿ ನಾಲ್ವರನ್ನು ಬಂಧಿಸಿದೆ

ಬಂಧನದ ವೇಳೆ ಯಾವುದೇ ಆಯುಧ ಪತ್ತೆಯಾಗಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್