ಕಾಸರಗೋಡು:ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಪೆರ್ಲ ಮಣ್ಣಂಗಳದ ಜಾನು ನಾಯ್ಕ್ ರವರ ಪುತ್ರ ಎನ್. ಜೆ.ರೋಷನ್ (29) ಮೃತಪಟ್ಟವರು.
ಗುರುವಾರ ರಾತ್ರಿ ಅಡ್ಕಸ್ಥಳದಲ್ಲಿ ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದು, ರೋಷನ್ ಗಂಭೀರವಾಗಿ ಗಾಯವಾಗಿತ್ತು. ಅವರನ್ನು ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೇಸ್ ದಾಖಲಾಗಿದೆ.