ವೈದ್ಯರ ‌ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ ಆರೋಪ, ಆಸ್ಪತ್ರೆ ಮೇಲೆ ಕಲ್ಲು ತೂರಾಟ

ಗದಗ:ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೋರ್ವರು ಬಲಿಯಾಗಿರುವ ಆರೋಪ ಬೆಟಗೇರಿ ಜರ್ಮನ್ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ.

ಇಸ್ಮಾಯಿಲ್ ಡಂಬಳ ಮೃತ ರೋಗಿ.ಇಸ್ಮಾಯಿಲ್ ಡಂಬಳ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ನಾಲ್ಕು‌ ದಿನಗಳ ಹಿಂದೆ ಜರ್ಮನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಅವರಿಗೆ ನಾಲ್ಕು ದಿನಗಳಿಂದ ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರೋಗಿಯನ್ನು ನೋಡಲು ಸಂಬಂಧಿಕರಿಗೆ ಬಿಟ್ಟಿರಲಿಲ್ಲ ಎಂದು ಆಪಾದಿಸಲಾಗಿದೆ.

ವೈದ್ಯರು ಹಣಕ್ಕಾಗಿ ರೋಗಿಗೆ ಚಿಕಿತ್ಸೆ ನೀಡುವ ನಾಟಕ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಕಿಡಿಕಿ ಗಾಜು ಪುಡಿ ಪುಡಿಯಾಗಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಬೆಟಗೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಬೆಟಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ‌.

ಟಾಪ್ ನ್ಯೂಸ್