ಯುವತಿ ಜೊತೆ ಅಸಭ್ಯವಾಗಿ ವರ್ತನೆ ಆರೋಪ; ಯುವಕನಿಗೆ ಕಂಬಕ್ಕೆ ಕಟ್ಟಿ ಚಪ್ಪಲಿ ಏಟು

ಯುವತಿ ಜೊತೆ ಅಸಭ್ಯವಾಗಿ ವರ್ತನೆ ಆರೋಪ; ಯುವಕನಿಗೆ ಕಂಬಕ್ಕೆ ಕಟ್ಟಿ ಚಪ್ಪಲಿ ಏಟು

ಗದಗ:ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ‌.

ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಸ್ಥಳೀಯರು ಧರ್ಮದೇಟು ಕೊಟ್ಟಿದ್ದಾರೆ.

ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯುವಕನನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜ್ಯದ ವಿವಿಧೆಡೆ ಗುಡುಗು ಮಳೆ ಸಾಧ್ಯತೆ

ಬೆಂಗಳೂರು:ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್