ಗಣೇಶೋತ್ಸವ ಮೆರವಣಿಗೆಯಲ್ಲಿ ಇತರ ಧರ್ಮೀಯರ ವಿರುದ್ಧ ಘೋಷಣೆ ಕೂಗಿದರೆ ಕೇಸ್ ದಾಖಲಿಸುತ್ತೇವೆ- ಎಸ್ಪಿ ಎಚ್ಚರಿಕೆ

ಶಿವಮೊಗ್ಗ; ಗಣೇಶೋತ್ಸವದ ಮೆರವಣಿಗೆಯಲ್ಲಿ ಅನ್ಯ ಧರ್ಮೀಯರ ವಿರುದ್ಧ ಘೋಷಣೆ ಕೂಗಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಬಿ.ಎಂ. ಲಕ್ಷ್ಮಿಪ್ರಸಾದ್ ಹೇಳಿದ್ದಾರೆ.

ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ‌ ಎಸ್ಪಿ, ಗಣೇಶೋತ್ಸವ ಆಚರಣೆಗೆ ಯಾರೂ ಭಯ ಪಡಬೇಡ. ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಘಟನೆ ನಂತರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸೆಕ್ಷನ್ 144 ಜಾರಿಯಾಗಿರುವ ಬಗ್ಗೆ ಯಾವುದೇ ಆತಂಕ ಬೇಡ. ನಿಷೇಧಾಜ್ಞೆ ಸಂದರ್ಭದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬುದರ ಬಗ್ಗೆ ಸೂಚನೆ ಇದೆ ಇಂತಹ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದ್ದಾರೆ.

ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಒಂದೇ ಸ್ಥಳದಲ್ಲಿ ಫ್ಲೆಕ್ಸ್ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಪೈಪೋಟಿ ಬೇಡ. ಪೊಲೀಸರ ಸಲಹೆ ಸೂಚನೆಗಳನ್ನು ಯುವಕರು ಪಾಲಿಸಬೇಕು. ಮುಖಂಡರ ನಡುವೆ ಗಲಾಟೆ ನಡೆಯಲ್ಲ, ಯುವಕರ ನಡುವೆ ಗಲಾಟೆ ನಡೆಯುತ್ತದೆ. ಎಂಬುದನ್ನು ಯುವಕರು ಗಮನಿಸಬೇಕು, ಪೊಲೀಸರ ಸಲಹೆ ಪಾಲಿಸಬೇಕು ಎಂದು ಹೇಳಿದ್ದಾರೆ.

ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಸಂಪೂರ್ಣ ವಿಡಿಯೋ ಗ್ರಾಫಿ ಮಾಡಲಾಗುವುದು. ಬೇರೆಯವರ ಭಾವನೆಗೆ ಧಕ್ಕೆ ಬರದಂತೆ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್