ಆರೆಸ್ಸೆಸ್ಸ್ ನಿಂದ ಗರ್ಭಾವಸ್ಥೆಯಲ್ಲೇ ಮಕ್ಕಳಿಗೆ ಸಂಸ್ಕೃತಿ ಕಲಿಸಲು “ಗರ್ಭಸಂಸ್ಕಾರ” ಅಭಿಯಾನಕ್ಕೆ ಕರೆ; ಏನಿದು ಅಭಿಯಾನ?

ನವದೆಹಲಿ;ಗರ್ಭದಲ್ಲಿರುವ ಮಕ್ಕಳಿಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸಲು ‘ಗರ್ಭ ಸಂಸ್ಕಾರ’ ಎಂಬ ಅಭಿಯಾನವನ್ನು ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್ ಪ್ರಾರಂಭಿಸಿದೆ ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಹೇಳಿದ್ದಾರೆ.

ಗರ್ಭಾವಸ್ಥೆಯಲ್ಲಿ ಗೀತಾ ಪಠಣ, ರಾಮಾಯಣ ಮತ್ತು ಯೋಗಾಭ್ಯಾಸದ ಜೊತೆಗೆ ಗರ್ಭದಲ್ಲಿರುವ ಶಿಶುಗಳಿಗೆ ಸಾಂಸ್ಕೃತಿಕ ಮೌಲ್ಯಗಳನ್ನು ನೀಡಲು ಕಾರ್ಯಕ್ರಮವನ್ನು ಯೋಜಿಸುತ್ತಿದೆ.

ಗೀತಾ ಶ್ಲೋಕಗಳ ಪಠಣ, ರಾಮಾಯಣಗಳಿಗೆ ಒತ್ತು ನೀಡಲಾಗುವುದು. ಇದರಿಂದ ಗರ್ಭದಲ್ಲಿರುವ ಮಗು 500 ಪದಗಳನ್ನು ಕಲಿಯಬಹುದು ಎಂದು ಮಾಧುರಿ ಹೇಳಿದರು.

ಆರ್‌ಎಸ್‌ಎಸ್‌ನ ಮಹಿಳಾ ಅಂಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್ ಈ ಅಭಿಯಾನದ ಅಡಿಯಲ್ಲಿ ಕನಿಷ್ಠ 1,000 ಮಹಿಳೆಯರನ್ನು ತಲುಪುವ ಗುರಿ ಹೊಂದಿದೆ. ಈ ಅಭಿಯಾನದ ಭಾಗವಾಗಿ ಸಂವರ್ಧಿನಿ ನ್ಯಾಸ್ ಭಾನುವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯಾಗಾರವನ್ನು ನಡೆಸಿತು. ಇದರಲ್ಲಿ ಏಮ್ಸ್-ದೆಹಲಿ ಸೇರಿದಂತೆ ಹಲವಾರು ಸ್ತ್ರೀರೋಗತಜ್ಞರು ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com