ಕಾಂಗ್ರೆಸ್ ಗೆ ಸೇರ್ಪಡೆಯಾದ ಗೀತಾ ಶಿವರಾಜ್ ಕುಮಾರ್, ಪತ್ನಿ ಕಾಂಗ್ರೆಸ್ ಗೆ ಸೇರ್ಪಡೆ ಬಗ್ಗೆ ಶಿವರಾಜ್ ಕುಮಾರ್ ಹೇಳಿದ್ದೇನು?

ಬೆಂಗಳೂರು; ಗೀತಾ ಶಿವರಾಜ್ ಕುಮಾರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪತ್ನಿಯ ರಾಜಕೀಯದ ಪ್ರವೇಶದ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಗೀತಾ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಖುಷಿಯ ವಿಚಾರ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ಅವರು ತೆರಳುತ್ತಾರೆ ಎಂದು ಹೇಳಿದ್ದಾರೆ.

ಗೀತಾ ಅವರ ಜೊತೆಗೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮಾ ನಾಯಕ್ ಶಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಅವರು 2014 ರಲ್ಲಿ ಜೆಡಿಎಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅವರ ಸಹೋದರ ಮಧುಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ.
ಹೀಗಾಗಿ ಇಂದು ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com