ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿ ಗಂಡು ಮಗುವಿಗೆ ಜನ್ಮ ಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ!
ರಾಜಸ್ಥಾನ;ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಘಟನೆ ಬನ್ಸ್ವಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ನಿನ್ನೆ ರಾತ್ರಿ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆಯಲ್ಲಿ ಪರೀಕ್ಷೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಕಂಡು ಬಂದಿದೆ.
ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿಲೀಪ್ ರೊಕ್ಡಿಯಾ ಮಾತನಾಡಿ,ಆಸ್ಪತ್ರೆಗೆ ಕರೆತಂದ ನಂತರ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ.ಈ ಬಗ್ಗೆ ನಾವು ಬಾಲಕಿಯೊಂದಿಗೆ ಮಾತನಾಡಿದ್ದೇವೆ.ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮೀನಾ,ಅಪ್ರಾಪ್ತೆಯ ಕುಟುಂಬವು ನವಜಾತ ಶಿಶುವನ್ನು ತೆಗೆದುಕೊಳ್ಳಲು ನಿರಾಕರಿಸಿದೆ.ಹೀಗಾಗಿ ಶಿಶುವು ಸದ್ಯ ಮಕ್ಕಳ ಕಲ್ಯಾಣ ಸಮಿತಿಯ ಮೇಲ್ವಿಚಾರಣೆಯಲ್ಲಿದೆ ಎಂದು ಹೇಳಿದ್ದಾರೆ.