ಬಂಟ್ವಾಳ:ಗೂಡಿನಬಳಿ ಸಮೀಪದ ನಿವಾಸಿ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೃತ ಯುವಕ ತಂದೆ, ತಾಯಿ, 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ.
ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.