ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು; ಬಂಧನವಾದ ಕೆಲವೇ ದಿನಗಳಲ್ಲಿ ಬಿಡುಗಡೆ

ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಿದ್ದು, ಅವನನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಬಗ್ಗೆ ವರದಿಯಾಗಿದೆ.

ಕಳೆದ ಆಗಸ್ಟ್‌ನಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿತ್ತು ಮತ್ತು ಸಿಸಿಬಿ ಪೊಲೀಸರು ಆತನಿಗೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು.

ತನ್ನ ಬಂಧನ ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದ. ಈ ಕುರಿತ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ಸಮಿತಿಯು ವರದಿಯಲ್ಲಿ ಈ ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಹೇಳಿದೆ.

ಈ ವರದಿಯ ಅನ್ವಯ ಸೆ.16ರಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಆದೇಶ ಹೊರಡಿಸಿರುವ ಒಳಾಡಳಿತ ಇಲಾಖೆಯ(ಕಾನೂನು & ಸುವ್ಯವಸ್ಥೆ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್, ಪುನೀತ್ ಕೆರೆಹಳ್ಳಿಯನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದ್ದಾರೆ.

ಈ ಆದೇಶದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್