ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟು ಪತ್ತೆ

ಬೆಂಗಳೂರು:ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ತಿಲಕ್​ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೈದ್ಯರು ನೇಣಿಗೆ ಶರಣಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ತಿಲಕ್​ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ರೇಣುಕಾನಂದ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com