ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಕೇಳಿದರೆ ಬೀಳುತ್ತೆ ಕೇಸ್!

ಬೆಂಗಳೂರು;ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆದರೆ ಅಥವಾ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದರೆ, ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು, ಈ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆಯುತ್ತಿದ್ದ ಮೂರು ಕೇಂದ್ರಗಳ ಲಾಗಿನ್ ಐಡಿ ಹಿಂಪಡೆಯಲಾಗಿದೆ. ಯೋಜನೆ ದುರ್ಬಳಕೆ ತಡೆಯಲಾಗುವುದು ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಫಲಾನುಭವಿಗಳಿಂದ ಹಣ ಪಡೆಯುವುದು ಕಂಡುಬಂದರೆ, ಅಂತಹವರ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಹಿಂದಕ್ಕೆ ಪಡೆಯಬೇಕು. ನಿಯಮ ಗಾಳಿಗೆ ತೂರಿದವರ ವಿರುದ್ಧ ಪ್ರಕರಣವನ್ನೂ ದಾಖಲಿಸಬೇಕೆಂದು ಸೂಚಿಸಲಾಗಿದೆ ಎಂದರು.
ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿರುವುದು ಕಂಡುಬಂದರೆ ತಹಶೀಲ್ದಾರರು,ಪಿಡಿಒಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು.ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಕೊಡಬೇಕು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್