ಕಾಂಗ್ರೆಸ್ ಪಕ್ಷಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ: ಜಿ-23 ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್! ಏನಿದು ಗ್ರೂಪ್-23!
ನವದೆಹಲಿ;ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿರುವ ಬಗ್ಗೆ ವರದಿಯಾಗಿದೆ.
ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಝಾದ್ ಕಾಂಗ್ರೆಸ್ ತ್ಯಜಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಕಾಂಗ್ರೆಸ್ ಪಕ್ಷದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ಗುಲಾಂ ನಬಿ ಆಝಾದ್ ಅವರು 23 “ಭಿನ್ನಮತೀಯರ”ಗುಂಪಿನ ಪ್ರಮುಖ ಸದಸ್ಯರಾಗಿದ್ದರು.
ಗುಲಾಂ ನಬಿ ಆಝಾದ್ ಅವರು 2020 ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಸಂಘಟನೆಯ ಸಂಪೂರ್ಣ ಪುನರ್ ರಚನೆಗೆ ಹಾಗೂ ಪೂರ್ಣಕಾಲಿಕ ನಾಯಕತ್ವಕ್ಕೆ ಆಗ್ರಹಿಸಿದ್ದರು.