ಲಕ್ನೋ;ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮೆ.12 ರಂದು ಅಲಹಾಬಾದ್ ಹೈಕೋರ್ಟ್ ನೀಡಿದ ಸಮೀಕ್ಷೆಯ ಆದೇಶದ ವಿರುದ್ಧ ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ಪರಿಗಣಿಸಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.
‘ಶಿವಲಿಂಗ’ ಎಂದು ಹಿಂದೂ ಅರ್ಜಿದಾರರು ಹೇಳಿಕೊಳ್ಳುವ ವಾರಣಾಸಿ ಮಸೀದಿಯೊಳಗಿನ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಹೈಕೋರ್ಟ್ ಆದೇಶದಲ್ಲಿ ಇರುವ ನಿರ್ದೇಶನಗಳ ಅನುಷ್ಠಾನವನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಂದೂಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.