ನವದೆಹಲಿ;ಜ್ಞಾನವ್ಯಾಪಿ ಮಸೀದಿಗೆ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಜುಲೈ 27ರಂದು ನಡೆದ ವಿಚಾರಣೆ ವೇಳೆ ಸರ್ವಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಎಎಸ್‌ಐ ಸಮೀಕ್ಷೆಗೆ ತಡೆ ನೀಡಿತ್ತು.ಇಂದು ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಕೋರ್ಟ್ ತೀರ್ಪು ಪ್ರಕಟಿಸಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಭಾಗವನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.