ನವದೆಹಲಿ;ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ವಾರಣಾಸಿ ಕೋರ್ಟ್ ಅವಕಾಶವನ್ನು ನೀಡಿದೆ.
ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಇಡೀ ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸಮೀಕ್ಷೆ ಮಾಡಲು ನ್ಯಾಯಾಲಯ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಹಿಂದೂಪರ ಮಹಿಳೆಯರ ಅರ್ಜಿಗೆ ಪ್ರತಿಯಾಗಿ ತನ್ನ ಉತ್ತರವನ್ನು ಸಲ್ಲಿಸುವಂತೆ ಜ್ಞಾನವಾಪಿ ಮಸೀದಿ ಸಮಿತಿಗೆ ಸೂಚಿಸಿತು. ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಇಂದು ತನ್ನ ತೀರ್ಪು ಪ್ರಕಟಿಸಿದೆ.