ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡುತ್ತಿದ್ದೆ; ಎಚ್ ವಿಶ್ವನಾಥ್ ಏನೆಲ್ಲಾ ಹೇಳಿದ್ರು?

ನಾನೇನಾದರೂ JDS ರಾಜ್ಯಾಧ್ಯಕ್ಷನಾಗಿದ್ದರೆ HD ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡುತ್ತಿದ್ದೆ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧಿಸಿದ್ದು INDIA ಮೈತ್ರಿಗೆ ನಮ್ಮ ಬೆಂಬಲ ಎಂದು ಹೇಳಿದ್ದರು.

ಈ ಬಗ್ಗೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಪ್ರತಿಕ್ರಿಯಿಸಿದ್ದು ಸಿಎಂ ಇಬ್ರಾಹಿಂ ಅವರ ನಿಲುವು ಸರಿಯಾಗಿದೆ. ಸಿಎಂ ಇಬ್ರಾಹಿಂಗೆ ಉಚ್ಚಾಟನೆ ಮಾಡುವ ಅಧಿಕಾರ ಇದೆ. ರಾಜ್ಯಾಧ್ಯಕ್ಷ ಇಬ್ರಾಹಿಂ ಸ್ಟ್ಯಾಂಡ್ ಕರೆಕ್ಟ್ ಆಗಿದೆ. ಎಚ್‍ಡಿಕೆ ವೈಯಕ್ತಿಕವಾಗಿ ಬಿಜೆಪಿ ಜೊತೆಗೆ ಮೈತ್ರಿ ಬಗ್ಗೆ ಮಾತಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಮೈತ್ರಿಯ ಮೂಲಕ ಕುಮಾರಸ್ವಾಮಿ ಅವರು ಜಾತ್ಯತೀತ ಅನ್ನುವ ಅರ್ಥವನ್ನೇ ತೆಗೆದುಹಾಕಿಬಿಟ್ಟಿದ್ದಾರೆ.ಯಾರು ಚಮಚಾಗಿರಿ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಎಚ್ ವಿಶ್ವನಾಥ್ ಹೇಳಿದ್ದಾರೆ.

ಟಾಪ್ ನ್ಯೂಸ್