-ಹಫೀಝ್ ಗಂಜ್ ಪ್ರದೇಶದಲ್ಲಿ ನಡೆದ ದುರಂತ
ಉತ್ತರಪ್ರದೇಶ; ಹಫೀಝ್ ಗಂಜ್ ಪ್ರದೇಶದಲ್ಲಿ ಮದುವೆ ಬ್ಯಾಂಡ್‌ನ ಟ್ರಾಲಿ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಬಾಲಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪ್ರೇಮ್ ಶಂಕರ್ ಅವರ ಪುತ್ರ ಸಚಿನ್(12) ಹಾಗೂ ಸತೀಶ್ ಅವರ ಪುತ್ರ ಸಚಿನ್(15) ಮೃತ ಬಾಲಕರು
ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೈಟೆನ್ಷನ್ ಲೈನ್‌ಗಳ ಸಮೀಕ್ಷೆ ನಡೆಸುವಂತೆ ವಿದ್ಯುತ್ ಇಲಾಖೆಯ ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿರುವುದಾಗಿ ಬರೇಲಿಯ ಪೊಲೀಸ್ ಮಹಾನಿರೀಕ್ಷಕ ರಾಕೇಶ್ ಸಿಂಗ್ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಗೆ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್
ಗೃಹ ಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇಂದು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿ.ಕೆ. ಶಿವಕುಮಾರ್,
ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ’ ಎಂದು ತಿಳಿಸಿದರು.