ಹಕೀಂ ಕೂರ್ನಡ್ಕ ಗಡಿಪಾರು ಆದೇಶಕ್ಕೆ ತಡೆ‌

ಮಂಗಳೂರು;ಚುನಾವಣೆ ಹಿನ್ನೆಲೆ 6 ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶಕ್ಕೆ ಒಳಗಾಗಿದ್ದ ಹಕೀಂ ಕೂರ್ನಡ್ಕ ಅವರ ಗಡಿಪಾರಿಗೆ ಕರ್ನಾಟಕ ಹೈಕೋರ್ಟ್ ತಡೆ‌ ನೀಡಿದೆ.

ಜಿಲ್ಲಾಧಿಕಾರಿಗಳ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹಕೀಂ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರಿಗೆ ಮಧ್ಯಂತರ ತಡೆ ನೀಡಿದ್ದು, ಪೊಲೀಸರಿಗೆ ವಿವರಣೆ ಕೋರಿ ನೊಟೀಸ್ ನೀಡಿದೆ.

ಚುನಾವಣೆ ಹಿನ್ನೆಲೆ ದ.ಕ.ಜಿಲ್ಲೆಯಿಂದ 11 ಮಂದಿಗೆ 6 ತಿಂಗಳ ಕಾಲ ಗಡಿಪಾರುಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 6 ಪೊಲೀಸ್ ಠಾಣಾ ವ್ಯಾಪ್ತಿಯ 11 ಮಂದಿಗೆ ಮಾ.6ರಿಂದ ಸೆಪ್ಟಂಬರ್ 6ರವರೆಗೆ ಗಡಿಪಾರು ಮಾಡಲಾಗಿದೆ.ಇದರಲ್ಲಿ ಓರ್ವನ ಗಡಿಪಾರಿಗೆ ಇದೀಗ ತಡೆ ಬಿದ್ದಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com