ಹಂಪನಕಟ್ಟೆ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಕೊಲೆ ಪ್ರಕರಣ, ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯ ಬಂಧನ

ಮಂಗಳೂರು:ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ.ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

ಫೆ.3ರಂದು ಹಂಪನಕಟ್ಟೆ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ.

ಆರೋಪಿಯ ಬಂಧನ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com