ಹಾಸನದಲ್ಲಿ ಕಾರಿಗೆ ಟಿಪ್ಪರ್ ಢಿಕ್ಕಿಯಾಗಿ ಭೀಕರ ಅಪಘಾತ; ನಾಲ್ವರು ದುರ್ಮರಣ, ಮೂವರ ಸ್ಥಿತಿ ಗಂಭೀರ

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿರುವ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.

ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು.

ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್