ಹಾಸನ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮನನೊಂದು ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಗ್ರಾಮದ ಮಾನ್ಯ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮೊದಲನೇ ವರ್ಷದ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೆಷನ್ ಓದುತ್ತಿದ್ದಳು.
ಮಾನ್ಯ ಪರೀಕ್ಷೆ ಸಮಯದಲ್ಲಿ ಕಾಪಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಅಪಾಲಜಿ ಲೆಟರ್ ಬರೆದುಕೊಡುವಂತೆ ಉಪನ್ಯಾಸಕರು ತಿಳಿಸಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿನಿ ಪ್ರಾಂಶುಪಾಲರ ಕೊಠಡಿಗೆ ತೆರಳಿದ ಬಳಿಕ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.