ಹಾಸನ:ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಆಪ್ತನಿಗೆ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಕೃಷ್ಣೇಗೌಡ(53) ಅವರನ್ನು ಅವರ ಗ್ರಾನೈಟ್ ಫ್ಯಾಕ್ಟರಿ ಎದುರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡರಿಗೆ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಅವರು ಕೂಡ ತೆರಳಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.