ಹಾವೇರಿ;ರಟ್ಟೀಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಸಂಘಪರಿವಾರದ ಕಾರ್ಯಕರ್ತರು ಹಮ್ಮಿಕೊಂಡ ಬೈಕ್ ರ‍್ಯಾಲಿಯಲ್ಲಿ ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಎಸ್ಪಿ ಶಿವಕುಮಾರ್ ಮಾಹಿತಿ ನೀಡಿದ್ದು, ರಟ್ಟಿಹಳ್ಳಿ ಪಟ್ಟಣದಲ್ಲಿ ಇಂದು ಬೈಕ್ ರ‍್ಯಾಲಿ ನಡಿಯುತ್ತಿದ್ದ ವೇಳೆ ರ‍್ಯಾಲಿ ಮಾಡುವ ಮಾರ್ಗಬಿಟ್ಟು ಕಾರಂಜಿ ಸರ್ಕಲ್ ಗೆ ಹೋಗಿದ್ದಾರೆ.ಬಳಿಕ ಅಲ್ಲಿದ್ದ ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೋಲಿಸರು ಪರಿಸ್ಥಿತಿಯನ್ನು ಹತೋಟೆಗೆ ತಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 15 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಟ್ಟೀಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಸಂಘಪರಿವಾರದ ಕಾರ್ಯಕರ್ತರು ಹಮ್ಮಿಕೊಂಡ ಬೈಕ್ ರ‍್ಯಾಲಿ ವೇಳೆ ಅಶಾಂತಿ ಸೃಷ್ಟಿಯಾಗಿತ್ತು, ಕೆಲ ದುಷ್ಕರ್ಮಿಗಳು ಮಸೀದಿ, ಉರ್ದು ಶಾಲೆ, ಕೆಲಮನೆಗಳಿಗೆ ಕಲ್ಲು ಎಸೆದಿದ್ದರು.ವಾಹನಗಳನ್ನು ಜಖಂಗೊಳಿಸಿದ್ದರು.