ಹಾವೇರಿಯಲ್ಲಿ ಮಸೀದಿ, ಮನೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಹಾವೇರಿ:ಹಾವೇರಿಯಲ್ಲಿ ಮಸೀದಿ, ಮುಸ್ಲಿಮರ ಮನೆಗಳ ಮೇಲೆ ಮೇಲೆ ಹಿಂದುತ್ವ ಕಾರ್ಯಕರ್ತರು ಕಲ್ಲುತೂರಾಟ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಸಂಘಪರಿವಾರದ ಕಾರ್ಯಕರ್ತರು ಬೈಕ್ ರ್ಯಾಲಿ ಆಯೋಜಿಸಿದ್ದರು.ಈ ವೇಳೆ ಮುಸ್ಲಿಮರ ಮನೆ, ವಾಹನಗಳ ಮೇಲೂ ಕಲ್ಲುತೂರಾಟ ಮಾಡಲಾಗಿದೆ.

ದುಷ್ಕರ್ಮಿಗಳು ಕಾರಿನ ಗ್ಲಾಸ್​​​ ಒಡೆದು ಹಾಕಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಉರ್ದು ಶಾಲೆಗಳ ಮೇಲೂ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಹಿಂದುತ್ವ ಕಾರ್ಯಕರ್ತರು ಥಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com