ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ; ಆರೋಗ್ಯ ರಕ್ಷಣೆಗೆ ಇಲ್ಲಿದೆ ಮಹತ್ವದ ಸಲಹೆ…

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚುತ್ತಿದೆ.ಮಳೆಯ ನಿರೀಕ್ಷಿಸಿದ್ದರು ಮಳೆ ಬರದೆ ಜನರು ಕಂಗಾಲಾಗಿದ್ದಾರೆ.
ಬಿಸಿಲಿನ ತೀವ್ರತೆ ಕಂಡು ಬಂದ ಹಿನ್ನಲೆಯಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ.

ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕೆಲ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಸಾರ್ವಜನಿಕರು ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ಶುದ್ಧ ಕುಡಿಯುವ ನೀರನ್ನು ಹಾಗೂ ಛತ್ರಿ ತೆಗೆದುಕೊಂಡು ಹೋಗಬೇಕು.

ಬಿಸಿಲಿನಲ್ಲಿ ಜಮೀನು ಕೆಲಸ,ರಸ್ತೆ ಕಾಮಗಾರಿ ಮುಂತಾದ ಹೊರಗಡೆ ಕಾರ್ಯನಿರ್ವಹಿಸುವವರು ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ.

ಸಡಿಲವಾದ ತೆಳು ಬಣ್ಣದ ಹತ್ತಿ ಬಟ್ಟೆಯನ್ನು ಧರಿಸಬೇಕು. ಕೈಗೆ ಸಿಗುವಂತೆ ಶುದ್ಧ ಕುಡಿಯುವ ನೀರನ್ನು ಇಟ್ಟಕೊಳ್ಳಬೇಕು.

ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಅಗಾಗ ಕುಡಿಯಬೇಕು. ಮತ್ತು ಹಣ್ಣಿನ ರಸ ಅಥವಾ ಪಾನಕಗಳನ್ನು ಕುಡಿಯಿರಿ.

ಹತ್ತಿಯ ನುಣುಪಾದ ಬಟ್ಟೆ ಅಥವಾ ಟಿಸ್ಸು, ಕರ ವಸ್ತ್ರಗಳಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ ಅಥವಾ ಎಳೆನೀರು ಕುಡಿದರೆ ಉತ್ತಮ.

ಬೆಚ್ಚಗಿನ, ಮಸಾಲೆ ರಹಿತ ಶುದ್ಧ ಆಹಾರ ಸೇವಿಸಿರಿ. ಗಾಳಿಯಾಡುವಂತಿರುವ ಪಾದರಕ್ಷೆಗಳನ್ನು ಧರಿಸಬೇಕು.

ಬೇಸಿಲಿನಲ್ಲಿ ಯಾವುದೇ ವ್ಯಕ್ತಿ ತೊದಲು ಮಾತು ಕಂಡು ಬಂದರೆ ಕೂಡಲೇ ಅವರನ್ನು ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯುವಂತೆ ಮಾಡಬೇಕು. ಚರ್ಮ ಕೆಂಪಾದರೆ ಬೆವರು ಕಡಿಮೆ ಆದರೆ, ದೇಹದ ಉಷ್ಣತೆ ಜಾಸ್ತಿಯಾದರೆ ದೀರ್ಘವಾದ ತೀವ್ರ ಉಸಿರಾಟ ಇದ್ದಲ್ಲಿ ತುರ್ತಾಗಿ ಸಮೀಪ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದರು.

ಕಲುಷಿತ ನೀರು ಸೇವನೆ ಮಾಡಬಾರದು, ಶುದ್ದವಾದ ನೀರು ಕುಡಿಯಬೇಕಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com