ಮಂಗಳೂರು:ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ
48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರೀ ಬಿಸಿಲಿದೆ.ಜನರಲ್ಲಿ ವೈರಲ್ ಜ್ವರ ಕೂಡ ಹೆಚ್ಚಳವಾಗಿದೆ.
ಈ ಬಾರಿ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರುವ ಸಾಧ್ಯತೆ ಇದೆ.ಇದರಿಂದಾಗಿ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.