ಕುಂದಾಪುರ; ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಕುಂದಾಪುರ;ಕಾಲೇಜು ವಿದ್ಯಾರ್ಥಿ ಬಸ್ಸಿನಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.

ಹೆಮ್ಮಾಡಿ ಸಮೀಪದ‌ ನಿವಾಸಿ,ಕೋಟೇಶ್ವರ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ ಪೂಜಾರಿ(20) ಮೃತಪಟ್ಟ ಯುವಕ.

ಇಂದು ಬೆಳಿಗ್ಗೆ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಪ್ರಯಾಣಿಸುತ್ತಿದ್ದರು. ಹೆಮ್ಮಾಡಿ ಬಳಿ ಚಾಲಕ ಬಸ್ ನಿಲ್ಲಿಸುತ್ತಿದ್ದಂತೆ ಮುಂಬಾಗಿಲ ಬಳಿ ನಿಂತಿದ್ದ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆನ್ನಲಾಗಿದೆ. ಈ ವೇಳೆ ಸುದೀಪ್ ಮೇಲೆ ಬಸ್ ಹರಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com