ಹಿಜಾಬ್ ನಿಷೇಧ ವಾಪಸ್ಸು ಪಡೆಯಲು ಸೂಚಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು:ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್, ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ವೇಳೆ ಹೇಳಿದ್ದಾರೆ.

ಟಾಪ್ ನ್ಯೂಸ್