ಹಿಜಾಬ್ ಕುರಿತ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ನವದೆಹಲಿ;ಹಿಜಾಬ್‌ ಗೆ ಅನುಮತಿ ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಲು ಸುಪ್ರೀಂಕೋಟ್‌ ಸಮ್ಮತಿ‌ ನೀಡಿದೆ.

ಸಿಜೆಐ ಡಿ ವೈ ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್ ನರಸಿಂಹ ಪೀಠವು ತುರ್ತು ವಿಚಾರಣೆಗೆ ಒಪ್ಪಿಗೆಯನ್ನು ಸೂಚಿಸಿದೆ.

ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಅನುಮತಿ ಕೋರಿ ಕರ್ನಾಟಕದ ಕೆಲ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಮಾರ್ಚ್ 9 ರಂದು ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡದಿದ್ದರೆ ವಿದ್ಯಾರ್ಥಿನಿಯರು ಮತ್ತೆ ಒಂದು ವರ್ಷ ಕಳೆದುಕೊಳ್ಳುತ್ತಾರೆ ಎಂದು ವಿದ್ಯಾರ್ಥಿನಿಯರ ಪರ ವಕೀಲ ಶಾದನ್ ಫರಾಸತ್ ತುರ್ತು ವಿಚಾರಣೆಗೆ ಆಗ್ರಹಿಸಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com